October 18, 2026
Sunday, October 18, 2026
spot_img

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಆರೋಪಿ ಭರತ್ ಜಯರಾಮ್ ದಾಸ್ ಉಡುಪಿ ಜಿಲ್ಲೆಯಿಂದ ಗಡಿಪಾರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯಾಗಿರುವ ಉಡುಪಿ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರು ಆದೇಶ ಹೊರಡಿಸಿದ್ದಾರೆ.

ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ನಿವಾಸಿ ಭರತ್ ಜಯರಾಮ್ ದಾಸ್ (34) ಎಂಬಾತ ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ.

ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಭರತ್ ದಾಸ್ ವಿರುದ್ಧ ೩ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, ಉಳಿದ ೨ ಪ್ರಕರಣಗಳು ತನಿಖೆಯಲ್ಲಿವೆ. ಈತನನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Must Read