June 28, 2026
Sunday, June 28, 2026
spot_img

ಕ್ರಿಕೆಟ್‌ ಅಭಿಮಾನಿಗಳಿಗೆ ಶಾಕ್: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಬೆನ್ ಸ್ಟೋಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಹಾಗೂ ವಿಶ್ವದ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಬೆನ್ ಸ್ಟೋಕ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಅಂತ್ಯದಲ್ಲಿ ತಮ್ಮ 15 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ ಎಳೆಯುವುದಾಗಿ ಅವರು ತಿಳಿಸಿದ್ದಾರೆ.

ಪಂದ್ಯದ ನಾಲ್ಕನೇ ದಿನದಾಟಕ್ಕೂ ಮುನ್ನ ಡ್ರೆಸ್ಸಿಂಗ್ ರೂಮ್‌ನಲ್ಲಿ ಸಹ ಆಟಗಾರರೊಂದಿಗೆ ಮಾತನಾಡಿದ ಸ್ಟೋಕ್ಸ್, ತಂಡಕ್ಕಾಗಿ ತಾವು ಸಾಧ್ಯವಾದಷ್ಟು ಕೊಟ್ಟಿದ್ದೇನೆ. ಇದೀಗ ವಿದಾಯ ಹೇಳುವ ಸಮಯ ಬಂದಿದೆ ಎಂದು ಭಾವನಾತ್ಮಕವಾಗಿ ತಿಳಿಸಿದ್ದಾರೆ. ತಮ್ಮ ಕೊನೆಯ ಪಂದ್ಯದಲ್ಲಿ ಪ್ರತಿಯೊಬ್ಬ ಆಟಗಾರರೂ ತಂಡಕ್ಕಾಗಿ ಶೇ.100ರಷ್ಟು ಶ್ರಮಿಸಬೇಕು ಎಂದು ಅವರು ಮನವಿ ಮಾಡಿದರು.

ವಿಶೇಷವೆಂದರೆ ನಿವೃತ್ತಿ ಘೋಷಣೆಯಾದ ಕೆಲವೇ ಕ್ಷಣಗಳಲ್ಲಿ ಸ್ಟೋಕ್ಸ್ ಬೌಲಿಂಗ್‌ನಲ್ಲಿ ವಿಕೆಟ್ ಪಡೆದು ಅಭಿಮಾನಿಗಳ ಗಮನ ಸೆಳೆದರು.

ಇದನ್ನೂ ಓದಿ:

2019ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್‌ಗೆ ಐತಿಹಾಸಿಕ ಪ್ರಶಸ್ತಿ ಗೆಲ್ಲಿಸಿಕೊಟ್ಟ ಸ್ಟೋಕ್ಸ್, ಅದೇ ವರ್ಷ ಹೆಡಿಂಗ್ಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಅಜೇಯ 135 ರನ್‌ಗಳ ಇನಿಂಗ್ಸ್ ಮೂಲಕ ಕ್ರಿಕೆಟ್ ಇತಿಹಾಸದ ಶ್ರೇಷ್ಠ ಇನ್ನಿಂಗ್ಸ್‌ಗಳಲ್ಲಿ ಒಂದನ್ನು ದಾಖಲಿಸಿದ್ದರು.

ಸ್ಟೋಕ್ಸ್ ಇಂಗ್ಲೆಂಡ್ ಪರ 122 ಟೆಸ್ಟ್, 114 ಏಕದಿನ ಮತ್ತು 43 ಟಿ20 ಪಂದ್ಯಗಳನ್ನು ಆಡಿದ್ದು, 44 ಟೆಸ್ಟ್‌ಗಳಲ್ಲಿ ನಾಯಕತ್ವ ವಹಿಸಿದ್ದರು. 2022ರ ಟಿ20 ವಿಶ್ವಕಪ್ ಗೆಲುವಿನಲ್ಲೂ ಅವರು ಪ್ರಮುಖ ಪಾತ್ರವಹಿಸಿದ್ದರು. ಅವರ ನಿವೃತ್ತಿ ಇಂಗ್ಲೆಂಡ್ ಕ್ರಿಕೆಟ್‌ಗೆ ದೊಡ್ಡ ನಷ್ಟವೆಂದು ಪರಿಗಣಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !