ಹೊಸದಿಗಂತ ಡಿಜಿಟಲ್ ಡೆಸ್ಕ್
ಶ್ರೀಲಂಕಾ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ವೇಗಿ ಜಸ್ ಪ್ರೀತ್ ಬೂಮ್ರಾ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ.
ಶ್ರೀಲಂಕಾ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ನಲ್ಲಿ 8 ವಿಕೆಟ್ ಕಬಳಿಸಿದ್ದ ಬೂಮ್ರಾ ಭಾರತ ಭರ್ಜರಿ ಗೆಲುವು ದಾಖಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಟೆಸ್ಟ್ ಬೌಲರ್ ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಕಮಿನ್ಸ್ ಅಗ್ರಸ್ಥಾನ ಕಾಯ್ದುಕೊಂಡರೆ, ಭಾರತದ ಆಫ್ ಸ್ಪಿನ್ನರ್ ಆಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ರಬಾಡ, ಬೂಮ್ರಾ, ಶಾಹಿನ್ ಅಫ್ರೀದಿ, ಜೆಮಿಸನ್, ಸೌಥಿ ಆಂಡರ್ ಸನ್, ವ್ಯಾಗ್ನರ್, ಹೆಜಲ್ ವುಡ್ ನಂತರದ ಸ್ಥಾನಗಳಲ್ಲಿದ್ದಾರೆ.
ಇನ್ನು ಇತ್ತೀಚಿನ ದಿನಗಳಲ್ಲಿ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ 9 ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಉಬುಶೇನ್ ಅಗ್ರಸ್ಥಾನದಲ್ಲಿದ್ದರೆ, ಭಾರತದ ರೋಹಿತ್ವ ಶರ್ಮಾ 6, ಪಂತ್ 10 ನೇ ಸ್ಥಾನದಲ್ಲಿದ್ದಾರೆ. ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಜಡೇಜಾ ದ್ವಿತೀಯ ಹಾಗೂ ಅಶ್ವಿನ್ ತೃತಿಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ