Saturday, July 2, 2022

Latest Posts

ದೇಶದಲ್ಲಿ ಕ್ರಿಕೆಟ್ ಈ ಹಿಂದಿನಂತೆ ಮುಂದುವರಿಯಲಿದೆ: ಕ್ರಿಕೆಟ್ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದ ತಾಲಿಬಾನ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಫ್ಘಾನಿಸ್ತಾನದ ಬಹುತೇಕ ಪ್ರದೇಶಗಳನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಇದೀಗ ಆಡಳಿತದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.
ಈ ಹಿಂದೆ ಮಹಿಳಾ ಸ್ವಾತಂತ್ರ್ಯ ಹಾಗೂ ವಿದ್ಯಾಭ್ಯಾಸಗಳ ಕುರಿತಾಗಿ ಆದೇಶ ಹೊರಡಿಸಿದ್ದ ತಾಲಿಬಾನಿಗಳು ಇದೀಗ ಅಫ್ಘಾನಿಸ್ತಾನದ ಕ್ರಿಕೆಟ್ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದೆ.
ದೇಶದಲ್ಲಿ ಕ್ರಿಕೆಟ್ ಈ ಹಿಂದಿನಂತೆ ಮುಂದುವರಿಯಲಿದೆ ಎಂದು ಸಷ್ಟಪಡಿಸಿದೆ. ಇದರಿಂದ ಅಫ್ಘಾನಿಸ್ತಾನ್ ತಂಡವು ಮುಂದಿನ ಟಿ20 ವಿಶ್ವಕಪ್​ನಲ್ಲಿಭಾಗವಹಿಸುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೇ ಈ ಹಿಂದಿನ ವೇಳಾಪಟ್ಟಿಯಂತೆ ಸರಣಿಯನ್ನು ಆಡಲು ಕೂಡ ಅನುಮತಿ ನೀಡಿದೆ.
ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಬೇಕಿದೆ. ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯಗಳನ್ನು ನಿಗದಿತ ವೇಳಾಪಟ್ಟಿಯಲ್ಲಿ ನಡೆಸಲಾಗುವುದು ಎಂದು ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಹೇಳಿದ್ದಾರೆ.
ಎಸ್‌ಬಿಎಸ್ ಪಾಷ್ತೊ ಅವರೊಂದಿಗಿನ ಸಂಭಾಷಣೆಯಲ್ಲಿ, ತಾಲಿಬಾನ್ ಮುಖಂಡರು ಈಗಾಗಲೇ ನಿಗದಿ ಆಗಿರುವ ಪಂದ್ಯಗಳನ್ನು ಸಮಯಕ್ಕೆ ಸರಿಯಾಗಿ ನಡೆಸಲು ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಅಫ್ಘಾನಿಸ್ತಾನದೊಂದಿಗೆ ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಸಿದ್ಧತೆಗಳನ್ನು ಆರಂಭಿಸಿದೆ. ಉಭಯ ತಂಡಗಳ ನಡುವಿನ ಟೆಸ್ಟ್​ ಪಂದ್ಯವು ಹೋಬಾರ್ಟ್‌ನಲ್ಲಿ ನಡೆಯಲಿದೆ. ಅದಕ್ಕಾಗಿ ಸಿದ್ಧತೆ ನಡೆಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ವಕ್ತಾರರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss