ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 88 ರನ್ ಗಳಿಸಿ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ 8 ಬಾರಿ 1,000 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಚಿನ್ ತೆಂಡೂಲ್ಕರ್ 7 ಬಾರಿ ಈ ಸಾಧನೆ ಮಾಡಿದ್ದರು.
1994, 1996, 1998, 2000, 2003, 2007 ರಲ್ಲಿ ಸಚಿನ್ ತೆಂಡೂಲ್ಕರ್ 1,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ 2011, 2012, 2013, 2014, 2017, 2018, 2019, 2023 ರಲ್ಲಿ ಈ ಸಾಧನೆ ಮಾಡಿದ್ದಾರೆ.
ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳನ್ನು ದಾಖಲಿಸಿದ್ದರೆ, ಕೊಹ್ಲಿ ಈಗಾಗಲೇ 48 ಶತಕಗಳನ್ನು ಬಾರಿಸಿದ್ದಾರೆ. ತೆಂಡೂಲ್ಕರ್ ಸಾಧನೆ ಸರಿಗಟ್ಟಲು ಇನ್ನೊಂದು ಶತಕದ ಅಗತ್ಯವಿದೆ.