CRICKET | ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ ಸ್ಪಿನ್ನರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧದ 4 ನೇ ಟೆಸ್ಟ್ ಪಂದ್ಯದ ಮೊದಲ ದಿನ ರವಿಚಂದ್ರನ್ ಅಶ್ವಿನ್ ಒಂದು ವಿಕೆಟ್ ಪಡೆಡಿದ್ದಾರೆ. ಈ ಏಕೈಕ ವಿಕೆಟ್‌ನೊಂದಿಗೆ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 100 ವಿಕೆಟ್ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ರವಿಚಂದ್ರನ್ ಅಶ್ವಿನ್ ಅವರು ಇಂಗ್ಲೆಂಡ್ ವಿರುದ್ಧ 23 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 42 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಇದರೊಂದಿಗೆ 100 ವಿಕೆಟ್ ಪಡೆದು ಈ ವಿಶೇಷ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಮತ್ತೊಂದು ಅಪರೂಪದ ದಾಖಲೆಯನ್ನೂ ಸಹ ನಿರ್ಮಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 100 ವಿಕೆಟ್ + 1000 ರನ್ ಗಳಿಸಿದ ಏಷ್ಯಾದ ಮೊದಲ ಆಟಗಾರ ಅಶ್ವಿನ್. ವಿಶೇಷವೆಂದರೆ, ಅಶ್ವಿನ್ ಬಿಟ್ಟರೆ ಏಷ್ಯಾದ ಯಾವ ಆಟಗಾರನೂ 1000 ರನ್ + 100 ವಿಕೆಟ್ ಪಡೆದಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!