CRICKET | ಇಂದು ಭಾರತ-ಅಫ್ಘಾನಿಸ್ತಾನ್ ನಡುವೆ ನಡೆಯಲಿದೆ ಮೊದಲ ಟಿ20 ಪಂದ್ಯ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ ಮೊಹಾಲಿಯಲ್ಲಿ ನಡೆಯಲಿದೆ.

ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಇಂದಿನ ಪಂದ್ಯದಲ್ಲಿ ಕೊಹ್ಲಿ ಕಣಕ್ಕಿಳಿಯುತ್ತಿಲ್ಲ. ಅತ್ತ ಅಫ್ಘಾನಿಸ್ತಾನ್ ತಂಡದ ಆಲ್​ರೌಂಡರ್ ರಶೀದ್ ಖಾನ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರು ಕೂಡ 3 ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬ ಮಾಹಿತಿ ಇದೆ.

ಈ ಸರಣಿ ಮೊದಲ ಪಂದ್ಯಕ್ಕೆ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​​ಐಎಸ್​ ಬಿಂದ್ರಾ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯವು ರಾತ್ರಿ 7 ಗಂಟೆಗೆ ಶುರುವಾಗಲಿದೆ.

ಭಾರತ ತಂಡದ ಆಟಗಾರರು:
ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

ಅಫ್ಘಾನಿಸ್ತಾನ್ ತಂಡದ ಆಟಗಾರರು:
ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ (ನಾಯಕ) , ಹಝರತುಲ್ಲಾ ಝಝೈ , ನಜಿಬುಲ್ಲಾ ಝದ್ರಾನ್ , ಮೊಹಮ್ಮದ್ ನಬಿ , ಅಜ್ಮತುಲ್ಲಾ ಒಮರ್​ಝೈ , ಮುಜೀಬ್ ಉರ್ ರಹಮಾನ್ , ಶರಫುದ್ದೀನ್ ಅಶ್ರಫ್ , ಖೈಸ್ ಅಹ್ಮದ್ , ನವೀನ್ -ಉಲ್-ಹಕ್, ಫಝಲ್​ ಹಕ್ ಫಾರೂಖಿ, ನೂರ್ ಅಹ್ಮದ್, ಮೊಹಮ್ಮದ್ ಸಲೀಂ ಶಫಿ, ಕರೀಂ ಜನತ್ , ಇಕ್ರಮ್ ಅಲಿಖಿಲ್ , ಫರೀದ್ ಅಹ್ಮದ್ ಮಲಿಕ್ , ರಹಮತ್ ಶಾ , ಗುಲ್ಬದಿನ್ ನೈಬ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!