CRICKET | ಈ ಬಾರಿಯೂ ಭಾರತದಲ್ಲೇ ನಡೆಯಲಿದೆ IPL ಹಬ್ಬ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ IPL ಇನ್ನೇನು ಕೆಲವೇ ತಿಂಗಳಲ್ಲಿ ಆರಂಭವಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ IPL ವಿದೇಶದಲ್ಲಿ ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಆದರೆ ಇದಕ್ಕೆಲ್ಲ ಈಗ ಅಂತಿಮ ತೆರೆ ಬಿದ್ದಿದೆ. ಈ ಬಾರಿ IPL ಪಂದ್ಯಗಳು ನಮ್ಮ ಭಾರತದಲ್ಲೇ ನಡೆಯಲಿದೆ ಎಂದು ಐಪಿಎಲ್ ಮುಖ್ಯಸ್ಥ ಅರುಣ್‌ ಧುಮಾಲ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಾರಿ ಐಪಿಎಲ್‌ ಭಾರತದಲ್ಲೇ ನಡೆಯಲಿದೆ. ಈ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದೇವೆ. ಲೋಕಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಳ್ಳಲು ಕಾಯುತ್ತಿದೇವೆ. ಆ ಬಳಿಕ ಐಪಿಎಲ್ ವೇಳಾಪಟ್ಟಿ ಅಂತಿಮಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಮಾರ್ಚ್ ಅಂತ್ಯದ ವೇಳೆಗೆ IPL ಟೂರ್ನಿ ಶುರುವಾಗುವ ಸಾಧ್ಯತೆ ಇದ್ದು, ಎಲ್ಲಾ ಪಂದ್ಯಗಳು ಭಾರತದಲ್ಲಿ ನಡೆಯುವಂತೆ ನೋಡಿಕೊಳ್ಳುತ್ತೇವೆ ಎಂದು ಐಪಿಎಲ್ ಮುಖ್ಯಸ್ಥರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!