September 14, 2026
Monday, September 14, 2026
spot_img

ಕ್ರಿಕೆಟಿಗ ಅಭಿಷೇಕ್ ಪೊರೆಲ್‌ಗೆ ಕಾನೂನು ಸಂಕಷ್ಟ: ಲೈಂಗಿಕ ದೌರ್ಜನ್ಯದ ಆರೋಪದಡಿ ಬಂಧನಕ್ಕೆ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತೀಯ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿರುವ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್‌ಗೆ ಸಂಕಷ್ಟ ಎದುರಾಗಿದ್ದು, ಅವರನ್ನು ತಕ್ಷಣವೇ ಬಂಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಮೊಗ್ರಾ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ.

ಆರೋಪಿ ಕ್ರಿಕೆಟಿಗನ ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ತಕ್ಷಣವೇ ವಶಪಡಿಸಿಕೊಳ್ಳಲು ಹೈಕೋರ್ಟ್ ಸೂಚಿಸಿದೆ. ಜುಲೈ 14ರಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರಿದ್ದ ಪೀಠವು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಈ ಮಹತ್ವದ ನಿರ್ದೇಶನ ನೀಡಿದೆ. ಅಭಿಷೇಕ್ ಪೊರೆಲ್‌ನನ್ನು ಶೀಘ್ರವೇ ಪತ್ತೆಹಚ್ಚಿ ಬಂಧನಕ್ಕೆ ಒಳಪಡಿಸಬೇಕು ಮತ್ತು ತನಿಖೆಯನ್ನು ಚುರುಕುಗೊಳಿಸಬೇಕು ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ:

ತೃತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೀಡಿದ ಗಂಭೀರ ದೂರಿನ ಅನ್ವಯ ಈ ಕಾನೂನು ಕ್ರಮ ಜರುಗಿಸಲಾಗಿದೆ. ಅಭಿಷೇಕ್ ಪೋರೆಲ್ ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೀರ್ಘಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ಪೊಲೀಸರ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ:

ಸಾಧನಗಳ ಜಪ್ತಿಗೆ ಕಾರಣ:

ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಇನ್ಯಾವುದೇ ಮಾಧ್ಯಮಗಳಲ್ಲಿ ಯುವತಿಯ ಖಾಸಗಿ ಫೋಟೊಗಳು ಹಾಗೂ ದತ್ತಾಂಶಗಳು (Data) ದುರುಪಯೋಗವಾಗುವುದನ್ನು ತಡೆಯುವುದು ಹೈಕೋರ್ಟ್‌ನ ಮುಖ್ಯ ಉದ್ದೇಶವಾಗಿದೆ. ಹೀಗಾಗಿ, ಆರೋಪಿಯಿಂದ ಯಾವುದೇ ರೀತಿಯ ಖಾಸಗಿ ವಿಚಾರಗಳು ಪ್ರಸಾರವಾಗದಂತೆ ತಡೆಯಲು ಅವರ ಫೋನ್ ಮತ್ತು ಲ್ಯಾಪ್‌ಟಾಪ್ ಜಪ್ತಿ ಮಾಡಲು ನಿರ್ದೇಶಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಮುಂದುವರಿದಿದ್ದು, ಆರೋಪಿಯನ್ನು ಪತ್ತೆಹಚ್ಚಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೊಗ್ರಾ ಪೊಲೀಸರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !