ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬುಧವಾರ ಟೀಮ್‌ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಭೇಟಿ ನೀಡಿದರು.

ಸ್ನೇಹಿತರೊಂದಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು, ಶ್ರೀ ದೇವರಿಗೆ ಶೇಷ ಸೇವೆ ಸಮರ್ಪಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದರು.ಇವರಿಗೆ ದೇವಳದ ಅರ್ಚಕರಾಮಕೃಷ್ಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತರಾದ ಕೆ.ಎಲ್.ರಾಹುಲ್‌ ಅವರು ಕಳೆದ ಹಲವು ವರ್ಷಗಳಿಂದ ಶ್ರೀ ದೇವಳಕ್ಕೆ ಭೇಟಿ ನೀಡಿದೇವರ ದರುಶನ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!