ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಚೇತರಿಕೆ , ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅವರನ್ನು ಅಗರ್ತಲಾದ ಐಎಲ್‌ಎಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ದೆಹಲಿಗೆ ತೆರಳುವ ವಿಮಾನ ಟೇಕ್ ಆಫ್ ಆಗುವ ಮುನ್ನ ಅನಾರೋಗ್ಯಕ್ಕೆ ಒಳಗಾದ ಅಗರ್ವಾಲ್ ಅವರನ್ನು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಲಾಗಿತ್ತು.ಸದ್ಯ, ಐಎಲ್‌ಎಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಮಯಾಂಕ್ ಚೇತರಿಸಿಕೊಳ್ಳಲು 2 ರಿಂದ 3 ದಿನಗಳು ತೆಗೆದುಕೊಳ್ಳುತ್ತದೆ ಎಂದು ನಾವು ಭಾವಿಸಿದ್ದೆವು. 24 ಗಂಟೆಗಳಲ್ಲಿ ಅವರನ್ನು ಬಿಡುಗಡೆ ಮಾಡಲಾಯಿತು. ಏನಾಯಿತೋ ಅದು ಗೊತ್ತಿಲ್ಲ. ನಾನು ಈಗ ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ. ತ್ರಿಪುರಾದಲ್ಲಿ ಅವರ ಕಾಳಜಿ ಅದ್ಭುತವಾಗಿತ್ತು ಎಂದು ಕರ್ನಾಟಕ ಕೋಚ್ ಹೇಳಿದ್ದಾರೆ.

ಅಗರ್ವಾಲ್ ವಿಮಾನದಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ನೀರಿನ ಬಾಟಲಿ ಎಂದು ಭಾವಿಸಿ ರಾಸಾಯನಿಕ ಸೇವಿಸಿದ್ದಾರೆ. ತಕ್ಷಣವೇ ಅವರಿಗೆ ಗಂಟಲು ಮತ್ತು ಬಾಯಲ್ಲಿ ಉರಿಯ ಅನುಭವವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!