July 3, 2026
Friday, July 3, 2026
spot_img

ಕೊಪ್ಪಳದ ಅಂಜನಾದ್ರಿಗೆ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಭೇಟಿ: ಹನುಮನಿಗೆ ವಿಶೇಷ ಪೂಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಖ್ಯಾತ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಇಂದು ಅಂಜನಾದ್ರಿಗೆ ಭೇಟಿ ನೀಡಿದ್ದು, ಹನುಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪತ್ನಿಯ ಜೊತೆ 575 ಮೆಟ್ಟಿಲು ಹತ್ತಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿಯಲ್ಲಿ ಹನುಮನ ದರುಶನ​ ಪಡೆದಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಹಂಪಿಗೆ ತೆರಳಿ ವಿರೂಪಾಕ್ಷನ ದರ್ಶನ ಪಡೆದಿದ್ದರು. ಅದಕ್ಕೂ ಮೊದಲು ಅವರು ಸಾಸಿವೆಕಾಳು ಗಣೇಶ, ಹೇಮಕೂಟಕ್ಕೆ ತೆರಳಿದ್ದರು.ನಂತರ ಕೃಷ್ಣ ದೇವಸ್ಥಾನ, ಉಗ್ರನರಸಿಂಹ, ಬಡವಿಲಿಂಗ ದರ್ಶನ ಪಡೆದರು. ಮಧ್ಯಾಹ್ನದ ಬಳಿಕ ಚಕ್ರತೀರ್ಥ ಕೋದಂಡರಾಮ ದೇವಾಲಯ, ಯಂತ್ರೋದ್ಧಾರಕ ಆಂಜನೇಯ ದೇವಸ್ಥಾನ, ಅಚ್ಯುತರಾಯ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !