ಪ್ರಧಾನಿ ಮೋದಿ ಅವರ ಮೊದಲ ಭೇಟಿಯನ್ನು ನೆನಪಿಕೊಂಡ ಕ್ರಿಕೆಟಿಗ ರವೀಂದ್ರ ಜಡೇಜಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್‌ ಇಂಡಿಯಾದ ಸ್ಟಾರ್‌ ಆಲ್‌ರೌಂಡರ್‌ ರವೀಂದ್ರ ಜಡೇಜಾ ಸದ್ಯ ಪತ್ನಿ ಪತ್ನಿ ರಿವಾಬಾ ಅವರ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದು, ಅವರು ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಜಾಮ್‌ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿದ್ದಾರೆ.

ಗುಜರಾತ್‌ನ ಚುನಾವಣೆಯಲ್ಲಿ ಪತ್ನಿಯ ಗೆಲುವಿಗಾಗಿ ಜಡೇಜಾ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿದ್ದು, ಈ ವೇಳೆ ಪ್ರಧಾನಿ ಮೋದಿ ಹಾಗೂ ತಮ್ಮ ನಡುವಿನ ಮೊದಲ ಭೇಟಿಯ ಕ್ಷಣವನ್ನು ಸ್ಮರಿಸಿಕೊಂಡಿದ್ದಾರೆ.

೨೦೧೦ರಲ್ಲಿ ಭಾರತ ತಂಡದ ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣಕ್ಕೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕಾಗಿ ಆಡಲು ತೆರಳಿದ್ದ ವೇಳೆ ಮೋದಿ ಅವರನ್ನು ಭೇಟಿಯಾಗಿದ್ದೆ. ಈ ವೇಳೆ ಗುಜರಾತ್‌ ಮುಖ್ಯಮಂತ್ರಿ ಆಗಿದ್ದ ಮೋದಿ ಅವರು ಆತ್ಮೀಯವಾಗಿ ಸ್ವಾಗತಿಸಿದ್ದರು.

ಈ ವೇಳೆ ನಾಯಕರಾಗಿದ್ದ ಮಹೇಂದ್ರ ಸಿಂಗ್‌ ಧೋನಿ ನನ್ನನ್ನು ನರೇಂದ್ರ ಮೋದಿ ಅವರಿಗೆ ಪರಿಚಯಿಸಿದ್ದರು. ಈ ವೇಳೆ ಮೋದಿ ಅವರು ಅತ್ಯಂತ ಆತ್ಮೀಯತೆಯಿಂದ ಮಾತನಾಡಿದ್ದರು. ಅಲ್ಲದೆ, ‘ಇವ ನಮ್ಮ ಹುಡುಗ, ಚೆನ್ನಾಗಿ ನೋಡಿಕೊ’ ಎಂದು ಧೋನಿಗೆ ಹೇಳಿದ್ದರು ಎಂದು ಜಡೇಜಾ ಹೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!