ಬಹುಕಾಲದ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟರ್ ಋತುರಾಜ್ ಗಾಯಕ್ವಾಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಆರಂಭಿಕ ಬ್ಯಾಟ್ಸ್​ಮನ್ ಋತುರಾಜ್ ಗಾಯಕ್ವಾಡ್ ಬಹುಕಾಲದ ಗೆಳತಿ ಉತ್ಕರ್ಷ ಪವಾರ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ವಿವಾಹದ ಸಂಭ್ರಮದ ಫೋಟೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿರುವ ಋತುರಾಜ್ ಗಾಯಕ್ವಾಡ್ ‘From the pitch to the altar, our journey begins!’ ಎಂದು ಬರೆದುಕೊಂಡಿದ್ದಾರೆ.

ಋತುರಾಜ್ ಗಾಯಕ್ವಾಡ್ ಪತ್ನಿ ಉತ್ಕರ್ಷ ಪವರ್ ಕೂಡ ಕ್ರಿಕೆಟ್ ಆಟಗಾರ್ತಿಯಾಗಿದ್ದು, ಮಹಾರಾಷ್ಟ್ರ ಮಹಿಳಾ ಕ್ರಿಕೆಟ್ ತಂಡದ ಆಲ್​ರೌಂಡರ್ ಆಗಿದ್ದಾರೆ. ಇದೀಗ ಕ್ರಿಕೆಟ್ ದಂಪತಿಗಳಿಗೆ ಶಿಖರ್ ಧವನ್, ಶಿವಂ ದುಬೆ, ರಶೀದ್ ಖಾನ್, ಶ್ರೇಯಸ್ ಅಯ್ಯರ್, ಉಮ್ರಾನ್ ಮಲಿಕ್ ಸೇರಿದಂತೆ ಅನೇಕ ಆಟಗಾರರು ಶುಭಾಶಯ ಕೋರುತ್ತಿದ್ದಾರೆ.

ಐಪಿಎಲ್ ಸೀಸನ್ 16ರ ಫೈನಲ್ ಪಂದ್ಯದ ವೀಕ್ಷಣೆಗೆ ಅಹಮದಾಬಾದ್​ಗೆ ಆಗಮಿಸಿದ್ದ ಉತ್ಕರ್ಷ, ಸಿಎಸ್​ಕೆ ಚಾಂಪಿಯನ್ ಆಗುತ್ತಿದ್ದಂತೆ ಸಂಭ್ರಮಾಚರಣೆ ವೇಳೆ ರುತುರಾಜ್ ಜತೆಗೆ ಕಾಣಿಸಿಕೊಂಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!