ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬಗ್ಗೆ ನಟಿ ಮತ್ತು ರೂಪದರ್ಶಿ ಖುಷಿ ಮುಖರ್ಜಿ ಶಾಕಿಂಗ್ ಹೇಳಿಕೆಯನ್ನು ನೀಡಿ ಸಂಚಲನ ಸೃಷ್ಟಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಖುಷಿ ಮುಖರ್ಜಿ, ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕ ಕ್ರಿಕೆಟಿಗರು ನನಗೆ ಆಗಾಗ್ಗೆ ಸಂದೇಶಗಳನ್ನು ಕಳುಹಿಸುತ್ತಿದ್ದರು. ಹಾಗೆಯೇ ಈಗಲೂ ಅನೇಕ ಕ್ರಿಕೆಟಿಗರು ತನ್ನನ್ನು ಫಾಲೋ ಮಾಡುತ್ತಿದ್ದಾರೆ. ಆದರೆ ನಾನು ಯಾವುದೇ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡಲು ಬಯಸುವುದಿಲ್ಲ ಎಂದಿದ್ದಾರೆ.

ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವಾರು ಕ್ರಿಕೆಟಿಗರು ತಮ್ಮನ್ನು ಫಾಲೋ ಮಾಡುತ್ತಿದ್ದಾರೆ. ಟಿ20 ತಂಡದ ನಾಯಕ ಸೂರ್ಯಕುಮಾರ್ ನನಗೆ ಬಹಳಷ್ಟು ಮೆಸೇಜ್ಗಳನ್ನು ಕಳುಹಿಸುತ್ತಿದ್ದರು. ಆದರೆ ಈಗ ಅವರು ಹೆಚ್ಚು ಸಂವಹನ ನಡೆಸುತ್ತಿಲ್ಲ. ಹಾಗೆಯೇ ನಾನು ಯಾರೊಂದಿಗೂ ರಿಲೇಷನ್ಶಿಪ್ನಲ್ಲಿ ಇರಲು ನಾನು ಬಯಸುವುದಿಲ್ಲ ಮತ್ತು ಯಾವುದೇ ಲಿಂಕ್-ಅಪ್ ವದಂತಿಗಳನ್ನು ಇಷ್ಟಪಡುವುದಿಲ್ಲ ಎಂದಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಪ್ರಖ್ಯಾತರಾಗಿರುವ ಖುಷಿ ಮುಖರ್ಜಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 1.5 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ. ಆದರೆ ಅವರು ಮಾತ್ರ ಯಾರನ್ನೂ ಫಾಲೋ ಮಾಡುವುದಿಲ್ಲ.
ಖುಷಿ ಮುಖರ್ಜಿ ಅವರ ಈ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆಯಾದರೂ ಈ ಬಗ್ಗೆ ಸೂರ್ಯಕುಮಾರ್ ಯಾದವ್ ಯಾವುದೇ ಸ್ಪಷ್ಟನೇ ನೀಡಿಲ್ಲ.

