ಎಲ್ಲ ಮಾದರಿಯ ಕ್ರಿಕೆಟ್​​ಗೆ ನಿವೃತ್ತಿ ಘೋಷಿಸಿದ ಕನ್ನಡತಿ ಭಾರತ ಮಹಿಳಾ ತಂಡದ ಕ್ರಿಕೆಟರ್ ವನಿತಾ!

ಹೊಸದಿಗಂತ ಆನ್‌ಲೈನ್ ಡೆಸ್ಕ್

ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಕನ್ನಡತಿ ವನಿತಾ ವಿ.ಆರ್​. ಎಲ್ಲ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.
ಟ್ವಿಟರ್ ಮೂಲಕ ನಿವೃತ್ತಿ ಮಾಹಿತಿ ನೀಡಿದ ವನಿತಾ ,ತಮ್ಮ ಕ್ರಿಕೆಟ್ ಜೀವನದಲ್ಲಿ ಪ್ರೋತ್ಸಾಹ ನೀಡಿದ ಇ ಜೂಲನ್ ಗೋಸ್ವಾಮಿ ಮತ್ತು ಮಿಥಾಲಿ ರಾಜ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಇದೇ 31 ವರ್ಷದ ವನಿತಾ ಕುಟುಂಬಸ್ಥರು, ಸ್ನೇಹಿತರು, ಕೋಚ್​ಗಳು ಮತ್ತು ರಾಜ್ಯ ಕ್ರಿಕೆಟ್ ಅಸೋಸಿಯೇಷನ್​ಗೆ ಧನ್ಯವಾದ ಅರ್ಪಿಸುವ ಮೂಲಕ ತಮ್ಮ 19 ವರ್ಷದ ಕ್ರಿಕೆಟ್​ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ.
ವನಿತಾ 2014 ರಿಂದ 2016 ರವರೆಗೆ ಭಾರತ ತಂಡದ ಪರ ಆರು ODI ಮತ್ತು 16 T20 ಪಂದ್ಯಗಳನ್ನು ಆಡಿದ್ದಾರೆ.
ಜನವರಿ 2014 ರಲ್ಲಿ ಶ್ರೀಲಂಕಾ ವಿರುದ್ಧ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನಾಡುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ವನಿತಾ ಆ ಬಳಿಕ ಕೆಲ ಸಮಯದವರೆಗೆ ತಂಡದ ಖಾಯಂ ಸದಸ್ಯರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!