ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಿಸೆಂಬರ್.7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಚುನಾವಣಾ ಪ್ರಕ್ರಿಯೆ ಶುರುವಾಗಿ ಕ್ರಿಕೆಟಿಗೆ ವೆಂಕಟೇಶ್ ಪ್ರಸಾದ್ ಹಾಗೂ ವಿರೋಧಿ ಬಣದಿಂದ ಶಾಂತಕುಮಾರ್ ನಾಮಪತ್ರವನ್ನು ಸಲ್ಲಿಸಿದ್ದರು. ಆದರೆ ವಿಶಾಂತಕುಮಾರ್ ಸಲ್ಲಿಸಿದ್ದಂತ ನಾಮಪತ್ರ ತಿರಸ್ಕೃತಗೊಂಡಿದೆ. ಈ ಹಿನ್ನಲೆಯಲ್ಲಿ ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನಕ್ಕೆ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾದಂತೆ ಆಗಿದೆ.

