ಕ್ರಿಕೆಟರ್‌ ವಿರಾಟ್‌ ಕೊಹ್ಲಿಗೆ ಸಂಕಷ್ಟ: ಬಿಬಿಎಂಪಿಯಿಂದ ನೊಟೀಸ್‌ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್‌ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.

ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್‌.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ಸಮಜಾಯಿಷಿ ಕೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!