ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ರಾಜಕೀಯದಲ್ಲಿ ಅಜಿತ್ ಪವಾರ್ ಬಂಡಾಯದ ಬಳಿಕ ಸ್ಪೀಕರ್ ರಾಹುಲ್ ನಾರ್ವೇಕರ್ (Speaker ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳಿಗೆ ಉತ್ತರ ನೀಡುವಂತೆ ನೋಟಿಸ್ ನೀಡಿದ್ದಾರೆ.
7 ದಿನಗಳ ಕಾಲಾವಕಾಶ ನೀಡಲಾಗಿದ್ದು, ಅನರ್ಹತೆಯ ವಿರುದ್ಧದ ಕ್ರಮವನ್ನು ತಪ್ಪಿಸಲು ಅಗತ್ಯವಿರುವ ಎಲ್ಲಾ ಸಾಕ್ಷ್ಯಗಳನ್ನು ಸಲ್ಲಿಸಬೇಕು ಎಂದು ಸ್ಪೀಕರ್ ಕಚೇರಿಯಿಂದ ಸೂಚನೆ ನೀಡಲಾಗಿದೆ.
ಕಳೆದ ವರ್ಷ ಉದ್ಧವ್ ಠಾಕ್ರೆ ಬಣದಿಂದ ಅಂಧೇರಿ (ಪೂರ್ವ) ಉಪಚುನಾವಣೆಯಲ್ಲಿ ಗೆದ್ದಿದ್ದ ಆದಿತ್ಯ ಠಾಕ್ರೆ ಮತ್ತು ರುತುಜಾ ಲಟ್ಕೆ ಅವರಿಗೆ ನೋಟಿಸ್ ನೀಡಲಾಗಿಲ್ಲ.
ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಶಾಸಕ ಸುನೀಲ್ ಪ್ರಭು (Sunil Prabhu) ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿ ಏಕನಾಥ್ ಶಿಂಧೆ ಸೇರಿದಂತೆ 16 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ತೀರ್ಮಾನಿಸುವಂತೆ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಗೆ ನಿರ್ದೇಶನ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು. ಮೇ 11 ರಂದು ಸುಪ್ರೀಂಕೋರ್ಟ್ ಸ್ಪೀಕರ್ ಗೆ ಸೂಚಿಸಿತ್ತು.