ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ವಿಜಯಪುರ: ಕೌಟುಂಬಿಕ ಕಲಹದಿಂದಿ ಪತ್ನಿಯನ್ನು ಕೊಲೆ ಮಾಡಿ, ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರ ವಲಯದ ತೊರವಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂತೋಷ ರಾಮಚಂದ್ರ ಈಟಿ (33), ಶ್ರೀದೇವಿ ಸಂತೋಷ ಈಟಿ ದಂಪತಿಗಳು ಎಂದು ಗುರುತಿಸಲಾಗಿದೆ.
ಸಂತೋಷ ಈಟಿ ಈತನು, ಕೌಟುಂಬಿಕ ಕಲಹದ ಹಿನ್ನೆಲೆ ಮದ್ಯದ ಅಮಲಿನಲ್ಲಿ ತನ್ನ ಹೆಂಡತಿ ಶ್ರೀದೇವಿಯನ್ನು ಕೊಲೆ ಮಾಡಿ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗ್ರಾಮೀಣ ಠಾಣೆಯ ಪಿಎಸ್ ಐ ಉಪ್ಪಾರ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.