ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಎಂದರು. ಆರ್ಜಿ ಸಲ್ಲಿಸಲು ಹಲವು ಕಡೆಗಳಲ್ಲಿ ಹಣ ಪಡೆಯಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.