ಲೈಂಗಿಕ ದೌರ್ಜನ್ಯ ಆರೋಪ: KPCC ಕಾರ್ಯದರ್ಶಿ ಸ್ಥಾನದಿಂದ ಗುರಪ್ಪ ನಾಯ್ಡು ಉಚ್ಚಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿಕ್ಷಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಸ್ಥಾನದಿಂದ ಗುರಪ್ಪನಾಯ್ಡು ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆಯ ಶಿಕ್ಷಕಿಯೊಬ್ಬರ ಮೇಲೆ 2021ರ ಮಾರ್ಚ್ 1ರಿಂದ 2023ರ ಆಗಸ್ಟ್ 15ರವರೆಗೆ ನಾಯ್ಡು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುರಪ್ಪನಾಯ್ಡು ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದರು, ಇದೀಗ ಮಹಿಳೆ ನೀಡಿದ ದೂರಿನ ಆದಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!