March 27, 2026
Friday, March 27, 2026
spot_img

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು: ವಿವಿಧ ರಾಜ್ಯಗಳ ಮುಖ್ಯಮಂತ್ರಿ ಜೊತೆ ಪ್ರಧಾನಿ ಮೋದಿ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ ಇಂಧನ ಪೂರೈಕೆಯ ಉಂಟಾಗಿರುವ ಅಡೆತಡೆಗಳು ಹಾಗೂ ಪ್ರಸುತ್ತ ಸ್ಥಿತಿಗತಿಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್ ಆಗಿ ಸಭೆ ನಡೆಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಶುರುವಾದ ದಿನದಿಂದ ಇಲ್ಲಿವರೆಗೆ ವಿವಿಧ ರಾಜ್ಯಗಳಿಗೆ ಎದುರಾದ ಸಮಸ್ಯೆಗಳು, ಕೈಗೊಂಡ ನಿರ್ಧಾರಗಳ ಕುರಿತು ಪ್ರಧಾನಿ ಮೋದಿ ಅವರ ಮುಂದೆ ಮುಖ್ಯಮಂತ್ರಿಗಳು ವಿವರಿಸಿದರು.

ಸಭೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡರು. ಆದರೆ ಪ್ರಸುತ್ತ ಚುನಾವಣೆ ನಡೆಯಲಿರುವ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಕೇಂದ್ರಾಡಳಿತ ಪ್ರದೇಶ ಪುದಚೇರಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ ಇದ್ದ ಕಾರಣ ಮುಖ್ಯಮಂತ್ರಿಗಳು ಭಾಗವಹಿಸಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !