ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪೋರ್ಚುಗೀಸ್ ನ ಖ್ಯಾತ ಫುಟ್ ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅತಿ ಹೆಚ್ಚು ಗೋಲು ಗಳಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ.
ಈ ಹಿಂದೆ ದಾಖಲೆ ಬರೆದಿದ್ದ ಇರಾನಿನ ರೊನಾಲ್ಡೋ ಅಲಿ ಡೇಯಿ ಅವರ ದಾಖಲೆಯನ್ನು ಮುರಿಯುವ ಮೂಲಕ ಇದೀಗ ವಿಶ್ವದಲ್ಲೇ ಅತಿ ಹೆಚ್ಚು ಗೋಲ್ ಪಡೆದ ಮೊದಲ ಫುಟ್ ಬಾಲ್ ಆಟಗಾರ ಎಂಬ ಕೀರ್ತಿಗೆ ಕ್ರಿಸ್ಟಿಯಾನೋ ರೊನಾಲ್ಡೋ ಭಾಜನರಾಗಿದ್ದಾರೆ.
ಫುಟ್ ಬಾಲ್ ವಿಶ್ವಕಪ್ ಟೂರ್ನಿಯ ಕ್ವಾಲಿಫೈಯಿಂಗ್ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಪೋರ್ಚುಗಲ್ ತಂಡ 2-1 ಅಂತರದ ಗೋಲುಗಳನ್ನು ಪಡೆದು ವಿಜಯಪತಾಕೆ ಹಾರಿಸಿದ್ದು, ಇದೇ ಪಂದ್ಯದಲ್ಲಿ ಕ್ರಿಸ್ಟಿಯಾನೋ ರೊನಾಲ್ಡೋ ಅಲಿ ಡೇಯಿ ಅವರ 109 ಗೋಲುಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ.
47 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 49 ಗೋಲುಗಳನ್ನು ಗಳಿಸಿದ್ದಾರೆ.