ಕಾಂಗ್ರೆಸ್‌ ವಿರುದ್ಧ ಟೀಕೆ: ರಾಜ್ಯ ಬಿಜೆಪಿ ಸೋಷಿಯಲ್‌ ಮೀಡಿಯಾ ಸಂಚಾಲಕ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಂಗ್ರೆಸ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ್ ಮಾಕನೂರು ಅವರನ್ನು ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ವೇಳೆ ಪ್ರಶಾಂತ್ ಮಾಕನೂರು ಕೋರ್ಟ್​ನ ನಿರೀಕ್ಷಣಾ ಜಾಮೀನು ಆದೇಶ ಪ್ರತಿ ಪೊಲೀಸರ ಮುಂದೆ ಹಾಜರು ಪಡಿಸಿದ್ದಾರೆ.

ಕಾಂಗ್ರೆಸ್‌ ವಿರುದ್ಧ ಟೀಕೆ ಮಾಡುವ ಸಂಬಂಧ ಬಿಜೆಪಿಯ (BJP Karnataka) ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಮೊಟ್ಟೆ ವಿಡಿಯೋ ಅಪ್ಲೋಡ್‌ ಮಾಡಲಾಗಿತ್ತು. ಈ ಸಂಬಂಧ ಈ ಸಂಬಂಧ ಬುಧವಾರವಷ್ಟೇ (ಮೇ 8) ಕಾಂಗ್ರೆಸ್​ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda), ಐಟಿ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯಾ (Amit Malaveya) ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈ ಗ್ರೌಂಡ್ಸ್ ಪೊಲೀಸರು ನೋಟಿಸ್‌ ಜಾರಿ ಮಾಡಿ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದರು. ಇದರ ಬೆನ್ನಲೇ ಇಂದು ಬಿಜೆಪಿಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪ್ರಶಾಂತ್ ಮಾಕನೂರು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆದ್ರೆ, ಪ್ರಶಾಂತ್ ಮಾಕನೂರು ಕೋರ್ಟ್​ನ ನಿರೀಕ್ಷಣಾ ಜಾಮೀನು ಆದೇಶ ಪ್ರತಿ ಪೊಲೀಸರ ಮುಂದೆ ಹಾಜರು ಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!