September 30, 2026
Wednesday, September 30, 2026
spot_img

ಘೂಸ್ ಖೋರ್ ಪಂಡತ್ ಚಿತ್ರದ ವಿರುದ್ಧ ಟೀಕೆ: ಟೀಸರ್ ತೆಗೆಯುವಂತೆ ನೆಟ್‌ಫ್ಲಿಕ್ಸ್‌ಗೆ ಕೇಂದ್ರ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ಮನೋಜ್ ಬಾಜ್ ಪೇಯಿ ಅಭಿನಯದ ‘ಘೂಸ್ ಖೋರ್ ಪಂಡತ್’ ಚಿತ್ರದ ಟೀಸರ್ ಮತ್ತು ಇತರ ಪ್ರಚಾರ ವಿಷಯಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಶುಕ್ರವಾರ ಒಟಿಟಿ ವೇದಿಕೆ ನೆಟ್‌ಫ್ಲಿಕ್ಸ್‌ಗೆ ಕೇಳಿಕೊಂಡಿದೆ.

ಚಿತ್ರದ ಶೀರ್ಷಿಕೆಗೆ ಬ್ರಾಹ್ಮಣ ಸಮುದಾಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಟೀಸರ್ ಬಿಡುಗಡೆಗೊಂಡ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಶೀರ್ಷಿಕೆಯನ್ನು “ಜಾತಿವಾದಿ” ಮತ್ತು ಆಕ್ಷೇಪಾರ್ಹ ಎಂದು ಟೀಕಿಸಿದ್ದರು.

ಈ ಸಂಬಂಧ ಲಖನೌನ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರು ದಾಖಲಾದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನೊಟೀಸ್ ಕೂಡ ನೀಡಿದೆ.

ಇದೀಗ ಕೇಂದ್ರ ಸರಕಾರ, ಟೀಸರ್ ಮತ್ತು ಚಿತ್ರದ ಎಲ್ಲಾ ಇತರ ಪ್ರಚಾರ ವಿಷಯಗಳನ್ನು ತೆಗೆದುಹಾಕುವಂತೆ ನೆಟ್‌ಫ್ಲಿಕ್ಸ್‌ಗೆ ಸೂಚಿಸಿದೆ. ಈ ಕುರಿತು ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ,
ಕೇಂದ್ರದ ತ್ವರಿತ ಮತ್ತು ನಿರ್ಣಾಯಕ ಕ್ರಮವನ್ನು ನಾವು ಶ್ಲಾಘಿಸುತ್ತೇವೆ. ಅವಹೇಳನಕಾರಿ ಚಿತ್ರ ‘ಘೂಸ್ ಖೋರ್ ಪಂಡತ್’ ನಂತಹ ಆಕ್ಷೇಪಾರ್ಹ ವಿಷಯವನ್ನು ವೇದಿಕೆಯಿಂದ ತೆಗೆದುಹಾಕಲಾಗಿದೆ. ಅಲ್ಲದೆ, ಪ್ರಕರಣದಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.

Must Read