ಅಯೋಧ್ಯೆ ಭೇಟಿಗೆ ಟೀಕೆ: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ರಾಧಿಕಾ ಖೇರಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಛತ್ತೀಸ್‌ಗಢ ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಅವರು ರಾಜೀನಾಮೆ ನೀಡಿದ್ದಾರೆ.

ಇದರ ಹಿಂದಿದ್ದ ಬಲವಾದ ಕಾರಣವನ್ನು ಬಹಿರಂಗವಾಗಿ ತಿಳಿಸಿದ್ದಾರೆ. ಕಾಂಗ್ರೆಸ್​ನ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ರಾಜೀನಾಮೆ ವಿಷಯ ಮಾತ್ರವಲ್ಲದೇ ತನಗೆ ಎದುರಾದ ಅವಮಾನ ಸೇರಿದಂತೆ ಕೆಲವು ಗಂಭೀರ ಆರೋಪಗಳನ್ನು ಉಲ್ಲೇಖಿಸಿದ್ದಾರೆ.

‘ನಾನು ರಾಮಮಂದಿರಕ್ಕೆ (Ram Mandir) ಭೇಟಿ ನೀಡಿದ ಬಳಿಕ ಪಕ್ಷದಲ್ಲೇ ಟೀಕೆ ಮಾಡಲಾಗುತ್ತಿದೆ. ಹಾಗಾಗಿ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂಬುದಾಗಿ ರಾಧಿಕಾ ಖೇರಾ ತಿಳಿಸಿದ್ದಾರೆ.

ಪ್ರತಿಯೊಬ್ಬ ಹಿಂದುವಿಗೂ ರಾಮಮಂದಿರವು ಪವಿತ್ರ ಹಾಗೂ ಶ್ರದ್ಧಾ ಕೇಂದ್ರವಾಗಿದೆ. ಹಾಗಾಗಿ, ನಾನು ರಾಮಮಂದಿರಕ್ಕೆ ಭೇಟಿ ನೀಡಿದೆ. ನಾನು ಕಾಂಗ್ರೆಸ್‌ಗೆ 22 ವರ್ಷದ ನಿಷ್ಠಾವಂತಳಾಗಿ ದುಡಿದಿದ್ದೇನೆ. ಆದರೆ, ನಾನು ಹಿಂದು ಆಗಿ ರಾಮಮಂದಿರಕ್ಕೆ ಭೇಟಿ ನೀಡುವುದನ್ನು ತಡೆಯಲು ನನಗೇ ಆಗಲಿಲ್ಲ. ಪಕ್ಷದಲ್ಲಿ ಮಾತ್ರ, ನಾನು ರಾಮಮಂದಿರಕ್ಕೆ ಹೋಗಿದ್ದೇ ಅಪರಾಧ ಎಂಬಂತೆ ಬಿಂಬಿಸಲಾಗಿದೆ. ಇದಕ್ಕಾಗಿಯೇ ನನ್ನನ್ನು ಗುರಿಯಾಗಿಸಿ ಟೀಕಿಸಲಾಗಿದೆ. ಹಾಗಾಗಿ, ನಾನು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಛತ್ತೀಸ್‌ಗಢ ಕಾಂಗ್ರೆಸ್‌ನ ಪ್ರಮುಖ ನಾಯಕಿಯಾಗಿದ್ದ ರಾಧಿಕಾ ಖೇರಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಧಿಕಾ ಖೇರ ಅವರು ಬಿಜೆಪಿ ಸೇರುತ್ತಾರೋ, ಇಲ್ಲವೇ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೋ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!