ಬಾಲಕನನ್ನು ಬಲಿ ಪಡೆದ ಮೊಸಳೆಯನ್ನು ಹೊಡೆದು ಕೊಂದ ಗ್ರಾಮಸ್ಥರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬಾಲಕನ ಸಾವಿವಿಂದ ರೊಚ್ಚಿಗೆದ್ದ ಜನರು ನದಿಯಿಂದ ಮೊಸಳೆಯನ್ನು ಹಿಡಿದು.. ಅದನ್ನು ನೀರಿನಿಂದ ಹೊರ ತಂದು.. ಕಟ್ಟಿಗೆಯಿಂದ ಹೊಡೆದು ಸಾಯಿಸಿದ್ದಾರೆ. ಇದನ್ನು ಸ್ಥಳೀಯರೊಬ್ಬರು ವಿಡಿಯೋ ಕೂಡ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮೊಸಳೆಗೆ ಬಾಲಕ ಬಲಿ:

ಈ ಪ್ರಕರಣ ಜಿಲ್ಲೆಯ ರುಸ್ತಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 14 ವರ್ಷದ ಬಾಲಕ ನದಿಯಲ್ಲಿ ಸ್ನಾನ ಮಾಡುವ ವೇಳೆ ಮೊಸಳೆ ಬಾಲಕನನ್ನು ನೀರಿನೊಳಗೆ ಎಳೆದೊಯ್ದಿದೆ. ಇದರಿಂದಾಗಿ ಬಾಲಕ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದ ರೊಚ್ಚಿಗೆದ್ದ ಜನರು ನದಿಯಿಂದ ಮೊಸಳೆಯನ್ನು ಹಿಡಿದು ಹೊರ ತಂದಿದ್ದಾರೆ. ಬಳಿಕ ಗ್ರಾಮಸ್ಥರೆಲ್ಲರೂ ಒಟ್ಟಿಗೆ ಸೇರಿ ಕಟ್ಟಿಗೆಯಿಂದ ಮೊಸಳೆಗೆ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೊಸಳೆ ಸ್ಥಳದಲ್ಲೇ ಸಾವನ್ನಪ್ಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!