March 13, 2026
Friday, March 13, 2026
spot_img

ಕರುನಾಡ ರೈತರಿಗೆ ವರದಾನವಾದ ಬೆಳೆ ವಿಮೆ: ಚಿತ್ರದುರ್ಗದ 7 ಸಾವಿರಕ್ಕೂ ಹೆಚ್ಚು ರೈತರ ಖಾತೆಗೆ ಹಣ ಜಮೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಅನುಭವಿಸಿದ್ದ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಅಡಿಯಲ್ಲಿ ಜಿಲ್ಲೆಯ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ:

ಲೋಕಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಕೃಷಿ ಸಚಿವ ಆರ್.ಎನ್.ಕೆ. ಠಾಕೂರ್, “ಕರ್ನಾಟಕದಲ್ಲಿ 2016ರಿಂದ ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದ್ದು, ಇದುವರೆಗೆ ರಾಜ್ಯದ 1.34 ಕೋಟಿ ಅರ್ಜಿಗಳಿಗೆ ಒಟ್ಟು 18,783 ಕೋಟಿ ರೂ. ಪಾವತಿಸಲಾಗಿದೆ” ಎಂದು ತಿಳಿಸಿದ್ದಾರೆ. ಈ ಪರಿಹಾರವು ಜಿಲ್ಲೆಯ ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ದೊಡ್ಡ ಆರ್ಥಿಕ ಚೈತನ್ಯ ನೀಡಲಿದೆ ಎಂದು ಸಂಸದರು ಹರ್ಷ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !