ಬರದ ಹೊಡೆತಕ್ಕೆ ನೆಲಕಚ್ಚಿದ ಬೆಳೆ: ರೈತರ ಅಳಲು ಆಲಿಸಿದ ಕೇಂದ್ರ ಬರ ಅಧ್ಯಯನ ತಂಡ

ಹೊಸದಿಗಂತ ವರದಿ ಚಿತ್ರದುರ್ಗ: ಮಳೆ ಕೈಕೊಟ್ಟ ಪರಿಣಾಮ ಬೆಳೆ ನಷ್ಟ, ಅಂತರ್ಜಲ ಕುಸಿತ ಹಾಗೂ ಹೆಚ್ಚುತ್ತಿರುವ ಕೃಷಿ ವೆಚ್ಚದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಪರಿಸ್ಥಿತಿಯನ್ನು ಕೇಂದ್ರ ಬರ ಅಧ್ಯಯನ ತಂಡ ಭಾನುವಾರ ಕಣ್ಣಾರೆ ಕಂಡಿತು. ಮೊದಲ ಹಂತದಲ್ಲಿ ಬರಪೀಡಿತ ಎಂದು ಘೋಷಿಸಲಾಗಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಚಳ್ಳಕೆರೆ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ತಂಡ, ಒಣಗಿದ ಬೆಳೆಗಳು ಹಾಗೂ ರೈತರ ಸಂಕಷ್ಟವನ್ನು ಪರಿಶೀಲಿಸಿತು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ … Continue reading ಬರದ ಹೊಡೆತಕ್ಕೆ ನೆಲಕಚ್ಚಿದ ಬೆಳೆ: ರೈತರ ಅಳಲು ಆಲಿಸಿದ ಕೇಂದ್ರ ಬರ ಅಧ್ಯಯನ ತಂಡ