Monday, June 27, 2022

Latest Posts

ದತ್ತಾತ್ರೇಯ ದೇವಸ್ಥಾನದಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ಕೋಟಿ ಕೋಟಿ ಲೂಟಿ

ಹೊಸದಿಗಂತ ವರದಿ ಕಲಬುರಗಿ: 

ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಗ್ರಾಮದ ಪ್ರಸಿದ್ಧ ದತ್ತಾತ್ರೇಯ ದೇವಸ್ಥಾನದಲ್ಲಿ ನಕಲಿ ‌ ವೆಬ್‌ಸೈಟ್ ಸೃಸೃಷ್ಟಿ ಮಾಡಿ ಕೋಟಿ ಕೋಟಿ ಹಣ ಲೂಟಿ ಮಾಡಿದ ಐವರು ಆರೋಪಿಗಳ ವಿರುದ್ಧ ಎಫ್.ಐ.ಆರ್.ದಾಖಲಾಗಿದೆ ಎಂದು ಕಲಬುರಗಿ ಪೋಲಿಸ್ ವರಿಷ್ಠಾಧಿಕಾರಿ ಇಶಾ ಪಂಥ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಸುಪ್ರಸಿದ್ಧ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದ ನಕಲಿ ವೆಬ್‌ಸೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ದೇವಸ್ಥಾನದ ಅರ್ಚಕರಾದ ವಲ್ಲಭ ದಿನಕರ್ ಭಟ್, ಅಂಕೂರ್ ಪೂಜಾರಿ, ಪ್ರತೀಕ್ ಪೂಜಾರಿ, ಗಂಗಾಧರ್ ಪೂಜಾರಿ, ಶರತ್ ಭಟ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲು ಮಾಡಿ ತನಿಖೆ ನಡೆಸಲಾಗುತ್ತಿದೆ ಎಂದರು.

ಇನ್ನೂ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸೆನ್ ಪೋಲಿಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss