June 21, 2026
Sunday, June 21, 2026
spot_img

ಕೋಟಿ ಕೋಟಿ ಲೂಟಿಗೆ ಮೊಳಗಿತು ತಮಟೆ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ‘ಅಹೋರಾತ್ರಿ’ ಕದನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಸಮರ ಸಾರಿದೆ. ಸಚಿವ ತಿಮ್ಮಾಪೂರ ಅವರ ರಾಜೀನಾಮೆಗೆ ಪಟ್ಟು ಹಿಡಿದಿರುವ ವಿರೋಧ ಪಕ್ಷದ ನಾಯಕರು, ಅಸೆಂಬ್ಲಿ ಕಲಾಪ ಮುಂದೂಡಲ್ಪಟ್ಟರೂ ಮನೆಗೆ ಮರಳದೆ ಸದನದ ಒಳಗೇ ಅಹೋರಾತ್ರಿ ಧರಣಿ ಕುಳಿತಿದ್ದಾರೆ.

ಕೈಯಲ್ಲಿ ಪೋಸ್ಟರ್ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಶಾಸಕರು ಸದನದ ಬಾವಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಬರೀ ಘೋಷಣೆಗಳಷ್ಟೇ ಅಲ್ಲ, ತಮಟೆ ಬಾರಿಸಿ, ಹಾಡುಗಳನ್ನು ಹಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. “ಕೋಟಿ ಕೋಟಿ ಗೋವಿಂದ” ಎನ್ನುವ ಘೋಷಣೆಗಳು ಮೊಳಗುತ್ತಿದ್ದವು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಈ ಹೋರಾಟ ತೀವ್ರಗೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !