September 4, 2026
Friday, September 4, 2026
spot_img

ಅಡ್ಡ ಮತದಾನ ಆರೋಪ: ಆಣೆ ಪ್ರಮಾಣಕ್ಕಾಗಿ ಧರ್ಮಸ್ಥಳಕ್ಕೆ ಹೊರಟ ಶಾಸಕ ಹೆಚ್‌.ಕೆ.ಸುರೇಶ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಧಾನಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ ಆರೋಪದ ಹಿನ್ನೆಲೆ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್‌.ಕೆ. ಸುರೇಶ್‌ ಆಣೆ ಪ್ರಮಾಣ ಮಾಡಲು ಧರ್ಮಸ್ಥಳಕ್ಕೆ ಹೊರಟಿದ್ದಾರೆ.

ನೂರಾರು ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆ ಶಾಸಕ ಸುರೇಶ್‌ ಶ್ರೀಕ್ಷೇತ್ರದ ಕಡೆ ಹೊರಟಿದ್ದು, ಶ್ರೀ ಮಂಜುನಾಥಸ್ವಾಮಿಯ ಮೇಲೆ ಆಣೆ ಪ್ರಮಾಣ ಮಾಡಲಿದ್ದಾರೆ. ಇದಕ್ಕೂ ಮುನ್ನ ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಬಲಿ ಕಲ್ಲಿನ ಮೇಲೆ ಆಣೆ ಮಾಡಿದ್ದಾರೆ.ನಾನು ಅಡ್ಡ ಮತದಾನ ಮಾಡಿಲ್ಲ ಎಂದು ಶಾಸಕ ಹೆಚ್‌.ಕೆ.ಸುರೇಶ್‌ ಆಣೆ ಮಾಡಿದರು. ನಂತರ ಕರ್ಪೂರ ಹಚ್ಚಿ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದರು.

ಆರೋಪ ಬಂದ ಕೂಡಲೇ ಧರ್ಮಸ್ಥಳದ ಮಂಜುನಾಥಸ್ವಾಮಿ ಮೇಲೆ ಆಣೆ ಮಾಡುತ್ತೇನೆ ಎಂದು ಶಾಸಕ ಸುರೇಶ್‌ ಹೇಳಿದ್ದರು. ಮಾತಿನಂತೆ ಇಂದು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !