ಜನಸಂದಣಿ ನಿಯಂತ್ರಣ ವಿಧೇಯಕ ಅಂಗೀಕಾರ: ಇನ್ಮುಂದೆ 7-50 ಸಾವಿರ ಜನ ಸೇರಿದ್ರೆ DySP ಅನುಮತಿ ಕಡ್ಡಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆಯಲ್ಲಿ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.

ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಜನಸಂದಣಿ ನಿಯಂತ್ರಣ ವಿಧೇಯಕ ಮಂಡಿಸಿದರು. ಜನಸಂದಣಿ ನಿಯಂತ್ರಣ ಮಾಡಲು ಸರ್ಕಾರದಿಂದ ಕಾನೂನು ರೂಪಿಸಲು ಈ ಮಸೂದೆಯನ್ನು ಮಂಡಿಸಲಾಗಿತ್ತು. ಆರ್ ಸಿ ಬಿ ಘಟನೆ ಬಳಿಕ ಸರ್ಕಾರ ಎಚ್ಚೆತ್ತು ಈ ಕಾನೂನು ರೂಪಿಸಲಾಗಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ 7 ಸಾವಿರಕ್ಕಿಂತ ಕಡಿಮೆ ಜನ ಸೇರುವುದಾದರೆ ಠಾಣೆಯಿಂದ ಅನುಮತಿ ಪಡೆಯಬೇಕು. 7-50 ಸಾವಿರದೊಳಗೆ ಜನ ಸೇರಿದ್ರೆ ಡಿವೈಎಸ್ ಪಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!