ಹೊಸದಿಗಂತ ವರದಿ ವಿಜಯನಗರ:
ನೂತನ ಜಿಲ್ಲೆಯಾಗಿ ಉದಯವಾದ ಬಳಿಕ ಮೊದಲ ಬಾರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಗರಕ್ಕೆ, ಮಂಗಳವಾರ ಆಗಮಿಸಿ, ವಿಜಯನಗರ ಹಾಗೂ ಜಿಲ್ಲೆಗಳ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು.
ವಿಜಯನಗರ ಜಿಲ್ಲೆಯ ಕೂಡ್ಲಗಿ, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನ ಹಡಗಲಿ, ಹರಪನಹಳ್ಳಿ, ಸೇರಿದಂತೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಷ್ಟಗಿ, ಕನಕಗಿರಿ, ಗಂಗಾವತಿ, ಕೊಪ್ಪಳ ಸೇರಿದಂತೆ ನಾನಾ ಕಡೆಗಳಿಂದ ಜನಸಾಗರವೇ ಹರಿದು ಬಂತಿತ್ತು. ಹೊಸಪೇಟೆ ನಗರದ ಗಲ್ಲಿ ಗಲ್ಲಿಗಳಿಂದ ಸಾವಿರಾರು ಜನರು ಆಗಮಿಸಿದರು. ಇಡೀ ನಗರ ಕೇಸರಿ ಮಯವಾಗಿತ್ತು, ಎಲ್ಲರ ಕೈಯಲ್ಲೂ ಕಮಲ ಬಾವುಟಗಳು ಹಾರಾಡಿದವು.
ನಂತರ ವೇದಿಕೆಯಲ್ಲಿ ಕೊಪ್ಪಳ ಅಭ್ಯರ್ಥಿ ಮಂಜುಳಾ ಕರಡಿ, ವಿಜಯನಗರ ಕ್ಷೇತ್ರದ ಅಭ್ಯರ್ಥಿ ಸಿದ್ಧಾರ್ಥ್ ಸಿಂಗ್, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಅಭ್ಯರ್ಥಿ ಬ್ಯಾಲಹುಣುಸಿ ರಾಮಣ್ಣ, ಹೂವಿನ ಹಡಗಲಿ ಕ್ಷೇತ್ರದ ಅಭ್ಯರ್ಥಿ ಕೃಷ್ಣಾ ನಾಯಕ, ಗಂಗಾವತಿ ಕ್ಷೇತ್ರದ ಅಭ್ಯರ್ಥಿ ಪರಣ್ಣ ಮುನವಳ್ಳಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸದ ವೈ. ದೇವೇಂದ್ರಪ್ಪ, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಸಚಿವ ಹಾಗೂ ಯಲಬುರ್ಗಾ ಕ್ಷೇತ್ರದ ಅಭ್ಯರ್ಥಿ ಹಾಲಪ್ಪ ಆಚಾರ್, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ವಿಪ ಸದಸ್ಯೆ ಹೇಮಲತಾ ನಾಯಕ್, ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್, ಕೊಪ್ಪಳ ಕಾರ್ಯಾಧ್ಯಕ್ಷ ಗಿರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಸೇರಿದಂತೆ ಇತರರು ಇದ್ದರು.