Tuesday, July 5, 2022

Latest Posts

ಮಸ್ಕಿ ಕ್ಷೇತ್ರದಲ್ಲಿ ಸಿಆರ್‌ಪಿಎಫ್ ಮಹಿಳಾ ಯೋಧೆ ಕ್ರಿಶ್ಚಿಯನ್ ಧರ್ಮದ ಪರ ಪ್ರಚಾರ: ಠಾಣೆಗೆ ದೂರು

ಹೊಸ ದಿಗಂತ ವರದಿ, ಶಿವಮೊಗ್ಗ :

ಸಿಆರ್‌ಪಿಎಫ್ ಮಹಿಳಾ ಯೋಧರೋರ್ವರು ರಾಯಚೂರು ಜಿಲ್ಲೆ ಮಸ್ಕಿ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಧರ್ಮದ ಪರ ಪ್ರಚಾರ ನಡೆಸಿದ್ದಾರೆ ಎಂದು ಮಾಜಿ ಶಾಸಕ ನಂದೀಶ್ ರೆಡ್ಡಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ವಿಶ್ವ ಹಿಂದು ಪರಿಷತ್‌ನ ಸಹ ಕಾರ್ಯದರ್ಶಿ ಸುರೇಶ್‌ಬಾಬು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಳೆದ ಬುಧವಾರ ಮಸ್ಕಿ ಕ್ಷೇತ್ರದ ಮದ್ಗಲ್‌ನಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಸಿಆರ್‌ಪಿಎಫ್ ಸಿಬ್ಬಂದಿ ವಿರುದ್ಧ ಮಾಜಿ ಶಾಸಕ ನಂದೀಶ್‌ರೆಡ್ಡಿ ಅವರ  ಕಾರು ತಪಾಸಣೆ ನೆಪದಲ್ಲಿ ಕ್ರಿ ಶ್ಚಿಯನ್ ಧರ್ಮದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಹಾಗೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡುವುದರ ಜೊಗೆ ಶ್ರೀರಾಮಚಂದ್ರನ ಪೂಜೆ  ಕುರಿತು ಹಗುರವಾಗಿ ಮಾತನಾಡಿದ್ದಾರೆಂದು ಆರೋಪ  ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಸುರೇಶ್‌ಬಾಬು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss