VIRAL | ಕನ್ವರಿಯಾತ್ರಿಗಳಿಂದ ಸಿಆರ್‌ಪಿಎಫ್ ಜವಾನನ ಮೇಲೆ ಹಲ್ಲೆ: ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಪ್ರದೇಶದ ಮಿರ್ಜಾಪುರ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ ಆಘಾತಕಾರಿ ಘಟನೆಯೊಂದು ನಡೆದಿದೆ. ಕನ್ವರಿಯಾತ್ರಿಗಳು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF)ನ ಯೋಧನೊಬ್ಬನನ್ನು ಹಿಗ್ಗಾಮುಗ್ಗಾ ಥಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಟಿಕೆಟ್‌ಗೆ ಸಂಬಂಧಿಸಿದ ವಿಷಯದಲ್ಲಿ ಕನ್ವರಿಯಾತ್ರಿಗಳು ಹಾಗೂ ಸಿಆರ್‌ಪಿಎಫ್ ಯೋಧನ ನಡುವೆ ವಾಗ್ವಾದ ಉಂಟಾಗಿ, ಅದು ವಿಕೋಪಕ್ಕೆ ತಿರುಗಿದೆ. ಇದಾದ ಬಳಿಕ ಅನೇಕ ಕನ್ವರಿಯಾತ್ರಿಗಳು ಯೋಧನನ್ನು ಸುತ್ತುವರೆದು ಕೈಯಲ್ಲಿ ಹೊಡೆದಿದ್ದು ಮಾತ್ರವಲ್ಲ, ನೆಲಕ್ಕೆ ಬಿದ್ದ ನಂತರ ಕಾಲಿನಿಂದ ತುಳಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಯಾತ್ರಿಕರ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಶಾಂತಿ ಹಾಗೂ ಭಕ್ತಿಯ ಮೂಲಕ ಪವಿತ್ರ ಯಾತ್ರೆಯಲ್ಲಿ ಭಾಗವಹಿಸಬೇಕಾದ ಭಕ್ತರು ಈ ರೀತಿ ಗೂಂಡಾಗಳಂತೆ ವರ್ತಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!