ಹೊಸದಿಗಂತ ವರದಿ ಹಾಸನ :
ಜಮ್ಮುವಿನಲ್ಲಿ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಯೋಧ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.
ರವಿಶಂಕರ್.ಎಂ.ಆರ್. (39) ಮೃತ ಯೋಧ. ರವಿಶಂಕರ್ ಗೆ ನಿವೃತ್ತಿ ಮೂರು ವರ್ಷ ಬಾಕಿ ಇತ್ತು.
ಜಮ್ಮುವಿನಲ್ಲಿ ಕರ್ತವ್ಯದಲ್ಲಿದ್ದ ಯೋಧ ರವಿಶಂಕರ್ ಅಸೀಕೆರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಯೋಧನ ವರದಿ ಪಡೆಯಲು ರವಿಶಂಕರ್ ಕಳೆದ ಒಂದು ವಾರದ ಹಿಂದೆ ಹೊಳೆನರಸೀಪುರಕ್ಕೆ ಬಂದಿದ್ದರು.
ಇಂದು ಕರ್ತವ್ಯಕ್ಕೆ ತೆರಳಬೇಕಿದ್ದ ರವಿಶಂಕರ್, ನಿನ್ನೆ ಜ್ವರ, ಸುಸ್ತು, ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಹೊಳೆನರಸೀಪುರದ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದಿದ್ದಾರೆ. ವೈದ್ಯರು ಮೃತ ರವಿಶಂಕರ್ ಗೆ ಕೇವಲ ಮಾತ್ರೆ ನೀಡಿ ಕಳುಹಿಸಿದ್ದಾರೆ. ಮನೆಗೆ ತೆರಳುತ್ತಿದ್ದಂತೆ ಯೋಧ ರವಿಶಂಕರ್.ಎಂ.ಆರ್.ಸಾವನ್ನಪ್ಪಿದ್ದಾರೆ. ಸರಿಯಾದ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಮೃತ ಯೋಧನ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ.
ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿರುವ ಮೃತ ಯೋಧನ ಶವ ಇರಿಸಲಾಗಿದ್ದು, ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.