ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಉಧಮ್ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.
ಸಿಆರ್ಪಿಎಫ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್ಒಜಿ) ಉಧಮ್ಪುರದ ದಾದು ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಒಳಗಾಯಿತು.