ಟ್ರಕ್‌ ಹಾಗೂ ಸಿಆರ್‌ಪಿಎಫ್‌ ವಾಹನ ನಡುವೆ ಅಪಘಾತ, ಓರ್ವ ಸಿಬ್ಬಂದಿ ಸಾವು, 12 ಮಂದಿ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ವಾಹನ ರಸ್ತೆ ಅಪಘಾತಕ್ಕೀಡಾದ ಘಟನೆ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ದುರಂತದಲ್ಲಿ ಓರ್ವ ಸೈನಿಕ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ.

ಹೈದರ್‌ಪೋರಾ ಬೈಪಾಸ್ ಪ್ರದೇಶದಲ್ಲಿ ಸಿಆರ್‌ಪಿಎಫ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 13 ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗಾಯಗೊಂಡ ಎಲ್ಲಾ ಸಿಆರ್‌ಪಿಎಫ್ ಸೈನಿಕರನ್ನು ಹುಮ್ಹಾಮಾದ ಬಿಎಸ್‌ಎಫ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆಸ್ಪತ್ರೆಯಲ್ಲಿ ತೀವ್ರ ಗಾಯಗೊಂಡಿದ್ದ ಕಾನ್‌ಸ್ಟೇಬಲ್ ಎಂ.ಎನ್. ಮಣಿ ಎಂಬುವವರು ಮೃತಪಟ್ಟಿದ್ದಾರೆ.

ಎಎಸ್‌ಐ ಜಸರಾಜ್ ಮತ್ತು ಕಾನ್‌ಸ್ಟೆಬಲ್ ಸುಶಾಂತ್ ಬಿಸ್ವಾಸ್ ಎಂಬ ಇಬ್ಬರು ಸಿಆರ್‌ಪಿಎಫ್ ಯೋಧರನ್ನು ಸೇನೆಯ 92 ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!