ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ಆರಂಭವಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ಇತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದಾರೆ.
ಇನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಅಧಿಕಾರಿಗಳೊಂದಿಗೆ ನಿರ್ಣಾಯಕ ಸಭೆಯ ಅಧ್ಯಕ್ಷತೆ ವಹಿಸಲು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕಣಿವೆಯಲ್ಲಿ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಪರಿಶೀಲಿಸಲು ಆಗಮಿಸಿದ್ದಾರೆ.