ಆರ್‌ಸಿಬಿಗೆ ಇಂದು ನಿರ್ಣಾಯಕ ಪಂದ್ಯ, ಪ್ಲೇಆಫ್‌ನಲ್ಲಿ ಉಳಿಯೋಕೆ ಗೆಲ್ಲೇಬೇಕು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್  ನಡುವಿನ ಪಂದ್ಯ ನಮ್ಮ ಆರ್‌ಸಿಬಿ ಪಾಲಿಗೆ ನಿರ್ಣಾಯಕವಾಗಿದೆ.

ಏಕೆಂದರೆ ಆರ್​ಸಿಬಿ ಆಡಿರುವ 10 ಪಂದ್ಯಗಳಲ್ಲಿ 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕು.

ಅಲ್ಲದೆ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿದರೆ ಅಂಕ ಪಟ್ಟಿಯಲ್ಲೂ ಮೇಲೇರಬಹುದು. ಒಂದು ವೇಳೆ ಇಂದು ಭರ್ಜರಿ ಜಯ ಸಾಧಿಸುವಲ್ಲಿ ಯಶಸ್ವಿಯಾದರೆ ಆರ್​ಸಿಬಿ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 7ನೇ ಅಥವಾ 8ನೇ ಸ್ಥಾನಕ್ಕೇರಲಿದೆ. ಅಂಕ ಪಟ್ಟಿಯಲ್ಲಿನ ಜಿಗಿತದೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!