ಟಿಎಂಸಿ ಗ್ರಾ.ಪಂ.ನಾಯಕನ ಮನೆಯಲ್ಲಿ ಕಚ್ಚಾ ಬಾಂಬ್‌ ಸ್ಫೋಟ: ಇಬ್ಬರು ಕಾರ್ಮಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಬಂಗಾಳದ ದೇಗಂಗಾದಲ್ಲಿ ತೃಣಮೂಲ ಕಾಂಗ್ರೆಸ್ ಪಂಚಾಯತ್ ನಾಯಕನ ನಿರ್ಮಾಣ ಹಂತದ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ ಎಂದು ಮೂಲಗಳು ವರದಿ ಮಾಡಿವೆ. ಸ್ಫೋಟದ ನಂತರ ಇಬ್ಬರು ಕಟ್ಟಡ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲವು ಕಾರ್ಮಿಕರು ಟಿಎಂಸಿ ನಾಯಕ ಶಾಹಿ ಸುಲ್ತಾನ ಅವರ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಹೋಗಿದ್ದ ಸಂದರ್ಭದಲ್ಲಿ ಮೆಟ್ಟಿಲುಗಳ ಕೆಳಗೆ ಇಟ್ಟಿದ್ದ ಬಾಂಬ್‌ಗಳು ಸ್ಫೋಟಗೊಂಡಿವೆ ಎನ್ನಲಾಗಿದೆ.

ಗಾಯಾಳುಗಳನ್ನು ಬಿಸ್ವನಾಥಪುರ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ನಿರ್ಮಾಣ ಸ್ಥಳದಿಂದ ಪೊಲೀಸರು ಮೂರು ಹೆಚ್ಚುವರಿ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದರೂ ಇದುವರೆಗೂ ಯಾರನ್ನೂ ಬಂಧಿಸಿಲ್ಲ.

ಕಳೆದ ಮಂಗಳವಾರ, ಉತ್ತರ 24 ಪರಗಣದ ಟಿಎಂಸಿ ಪಂಚಾಯತ್ ನಾಯಕ ಸುಕುರ್ ಅಲಿಯನ್ನು ಪೊಲೀಸರು ಶಸ್ತ್ರಾಸ್ತ್ರಗಳೊಂದಿಗೆ ಹಿಡಿದಿದ್ದರು.

ಮುಂದಿನ ವರ್ಷ ನಡೆಯಲಿರುವ ಪಂಚಾಯತ್ ಚುನಾವಣೆಗೆ ಮುನ್ನ ಬಂಗಾಳದ ಕೆಲವು ಭಾಗಗಳಲ್ಲಿ ಇಂತಹ ಘಟನೆಗಳು ವರದಿಯಾಗುತ್ತಿರುವುದು ಅನುಮಾನವನ್ನು ಹುಟ್ಟುಹಾಕಿದೆ ಎಂದು ಮೂಲಗಳು ಉಲ್ಲೇಖಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!