ಹೊಸದಿಗಂತ ಡಿಜಿಟಲ್ ಡೆಸ್ಕ್:
ಬರೋಬ್ಬರಿ ಮೂರು ವರ್ಷಗಳ ಬಳಿಕ ವೆನೆಜುವಲಾದಿಂದ ಕಚ್ಚಾ ತೈಲ ಖರೀದಿಸಲು ಭಾರತ ಮುಂದಾಗಿದೆ.
ಇದಕ್ಕೆ ಪೂರಕವಾಗಿ ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡಾ ಹೇಳಿಕೆ ನೀಡಿದ್ದು, ವೆನೆಜುವೆಲಾ ಸೇರಿದಂತೆ ನಿರ್ಬಂಧ ಇಲ್ಲದ ಯಾವುದೇ ದೇಶದಿಂದ ತೈಲ ಆಮದು ಮಾಡಿಕೊಳ್ಳಲು ಭಾರತ ಸಿದ್ಧ ಎಂದು ಹೇಳಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಹಾಗೂ ಎಚ್ಪಿಸಿಎಲ್-ಮಿತ್ತಲ್ ಎನರ್ಜಿ ವೆನೆಜುವೆಲಾದ ತೈಲ ಖರೀದಿಸಿದ್ದು, ಇದು ಮುಂದಿನ ಎರಡು ತಿಂಗಳುಗಳಲ್ಲಿ ಭಾರತಕ್ಕೆ ಬರುವ ಸಾಧ್ಯತೆಯಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ