ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ವ್ಯಕ್ತಯೊಬ್ಬ ನಾದಿನಿಯನ್ನು ಕೊಲೆಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಆಕೆಯ 10 ವರ್ಷದ ಪುಟ್ಟ ತಂಗಿಯನ್ನು ಕೊಲೆ ಮಾಡಿದ್ದಾನೆ. ಪೊಲೀಸರು ಆರೋಪಿಯನ್ನು ಈಗಾಗಲೇ ಬಂಧಿಸಿದ್ದಾರೆ. ಆರೋಪಿಯನ್ನು ಬಿಹಾರದ ಮುಂಗೇರ್ ಜಿಲ್ಲೆಯ ಮೂಲದ ಮೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ.
ಆತ ಬಾಲಕಿಯನ್ನು ಕೊಂದು, ಆಕೆಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ, ಶಾಲು ಸುತ್ತಿ ಚರಂಡಿಯಲ್ಲಿ ಎಸೆದು ಬಂದಿದ್ದ. ರಾಜ್ಯ ವಿಪತ್ತು ನಿರ್ವಹಣಾ ಪಡೆ ನೆರವಿನಿಂದ ಪೊಲೀಸರು ನಂತರ ಶವವನ್ನು ಚರಂಡಿಯಿಂದ ಹೊರತೆಗೆದಿದ್ದಾರೆ. ಬಾಲಕಿಯ ತಂದೆ ಸೋಮವಾರ ಪಾಲಂ ವಿಹಾರ್ ಪೊಲೀಸ್ ಠಾಣೆಯಲ್ಲಿ ತನ್ನ ಕಿರಿಯ ಮಗಳು ಶನಿವಾರದಿಂದ ಕಾಣೆಯಾಗಿದ್ದಾಳೆಂದು ದೂರು ಕೊಟ್ಟಿದ್ದರು.
ಹುಡುಕಾಟ ಆರಂಭಿಸಿದರೂ, ಆರಂಭದಲ್ಲಿ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚುವಲ್ಲಿ ವಿಫಲರಾದರು. ವಿಚಾರಣೆಯ ಸಮಯದಲ್ಲಿ, ಹುಡುಗಿಯ ಕುಟುಂಬವು ತಮ್ಮ ಹಿರಿಯ ಮಗಳು ಹಾಗೂ ಆಕೆಯ ಪತಿಯ ಸಂಬಂಧ ಅಷ್ಟು ಚೆನ್ನಾಗಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದರು.
ನಂತರ ಪೊಲೀಸರು ಬಜ್ಗೇರಾದಿಂದ ಕುಮಾರ್ನನ್ನು ಬಂಧಿಸಿದರು. ವಿಚಾರಣೆಯ ಸಮಯದಲ್ಲಿ, ತನ್ನ ವೈವಾಹಿಕ ವಿವಾದದಲ್ಲಿ ಮಧ್ಯಪ್ರವೇಶಿಸದಿದ್ದಕ್ಕಾಗಿ ತನ್ನ ಅತ್ತೆ ಹಾಗೂ ಪತ್ನಿ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯನ್ನು ಕೊಂದಿದ್ದಾಗಿ ಹೇಳಿದ್ದಾನೆ.