ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಮತ್ತು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ರೂಷರ್ನಲ್ಲಿದ್ದವರು ಆಂಧ್ರಪ್ರದೇಶದ ನಂದ್ಯಾಳ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಸೈದಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.