ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಸುರೇಶ ತುಪ್ಪದ (52), ಮಹಾಂತಪ್ಪ ತುಪ್ಪದ (65) ಮೃತ ದುರ್ದೈವಿಗಳು.
ಗದಗ ಮೂಲದ ಕುಟುಂಬವು ಗದಗದಿಂದ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ತೆರಳಿದ್ದರು. ಕೊಲ್ಲಾಪುರದಿಂದ ವಾಪಸ್ಸಾಗುತ್ತಿದ್ದಾಗ ಮುಲ್ಲಾ ಧಾಬಾ ಬಳಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಾಯಾಳುಗಳಿಗೆ ಧಾರವಾಡ ಜಿಲ್ಲಾ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಧಾರವಾಡ ಗರಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

