ಹೊಸದಿಗಂತ ಡಿಜಿಟಲ್ ಡೆಸ್ಕ್:
IPL 2025ರ ಮೂರನೇ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ರೋಮಾಂಚಕ ಪಂದ್ಯ ನಡೆಯಲಿದೆ. ಎರಡು ದೊಡ್ಡ ಫ್ರಾಂಚೈಸಿಗಳು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್, ಹಾಗೂ ಸೂರ್ಯಕುಮಾರ್ ಯಾದವ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡಗಳು ಅನುಭವಿ ಆಟಗಾರರನ್ನು ಕಣಕ್ಕಿಳಿಸುತ್ತಿದೆ.
ಈ ಎರಡು ತಂಡಗಳ ನಡುವೆ 39 ಕ್ಕೂ ಹೆಚ್ಚು ಪಂದ್ಯಗಳಿದ್ದು, ಮುಂಬೈ 21 ಬಾರಿ ಗೆದ್ದಿದೆ ಹಾಗೂ ಚೆನ್ನೈ 18 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮುಂಬರುವ ಪಂದ್ಯ ಈ ಐತಿಹಾಸಿಕ ಪೈಪೋಟಿಯಲ್ಲಿ ಮತ್ತೊಂದು ರೋಮಾಂಚಕ ಅಧ್ಯಾಯವಾಗಲಿದೆ.
ತಂಡಗಳು
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್ (ನಾಯಕ), ಎಂಎಸ್ ಧೋನಿ (ವಿಕೆಟ್ ಕೀಪರ್), ಡೆವೊನ್ ಕಾನ್ವೇ, ರಾಹುಲ್ ತ್ರಿಪಾಠಿ, ಶೇಕ್ ರಶೀದ್, ವಂಶ್ ಬೇಡಿ (ವಿಕೆಟ್ ಕೀಪರ್), ಸಿ ಆಂಡ್ರೆ ಸಿದ್ಧಾರ್ಥ್, ರಾಚಿನ್ ರವೀಂದ್ರ, ರವಿಚಂದ್ರನ್ ಅಶ್ವಿನ್, ವಿಜಯ್ ಶಂಕರ್, ಸ್ಯಾಮ್ ಕರನ್, ಅಂಶುಲ್ ಕಾಂಬೋಜ್, ದೀಪಕ್ ಹೂಡಾ, ಜೇಮೀ ಓವರ್ಟನ್, ಕಮಲೇಶ್ ನಾಗರ್ಕೋಟಿ, ರಾಮಕೃಷ್ಣ ಘೋಷ್, ರವೀಂದ್ರ ಜಡೇಜಾ, ಶಿವಂ ದುಬೆ, ಖಲೀಲ್ ಅಹ್ಮದ್, ನೂರ್ ಅಹ್ಮದ್, ಮುಖೇಶ್ ಚೌಧರಿ, ಗುರ್ಜಪ್ನೀತ್ ಸಿಂಗ್, ನಾಥನ್ ಎಲ್ಲಿಸ್, ಶ್ರೇಯಸ್ ಗೋಪಾಲ್, ಮಥೀಷ ಪತಿರಾನ.
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಾಬಿನ್ ಮಿಂಜ್, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಶ್ರೀಜಿತ್ ಕೃಷ್ಣನ್ (ವಿಕೆಟ್ ಕೀಪರ್), ಬೆವೊನ್ ಜಾಕೋಬ್ಸ್, ತಿಲಕ್ ವರ್ಮಾ, ನಮನ್ ಧೀರ್, ವಿಲ್ ಜಾಕ್ಸ್, ಮಿಚೆಲ್ ಸ್ಯಾಂಟ್ನರ್, ರಾಜ್ ಅಂಗದ್ ಬಾವಾ, ವಿಘ್ನೇಶ್ ಪುತೂರ್, ಕಾರ್ಬಿನ್ ಬಾಷ್, ಟ್ರೆಂಟ್ ಬೌಲ್ಟ್, ಕರ್ಣ್ ಶರ್ಮಾ, ದೀಪಕ್ ಚಾಹರ್, ಅಶ್ವನಿ ಕುಮಾರ್, ರೀಸ್ ಟೋಪ್ಲಿ, ವಿಎಸ್ ಪೆನ್ಮೆಟ್ಸಾ, ಅರ್ಜುನ್ ತೆಂಡೂಲ್ಕರ್, ಮುಜೀಬ್ ಉರ್ ರೆಹಮಾನ್, ಜಸ್ಪ್ರೀತ್ ಬುಮ್ರಾ.