ಹೊಸದಿಗಂತ ಡಿಜಿಟಲ್ ಡೆಸ್ಕ್:
MLC ಸಿ.ಟಿ ರವಿ ಅವರ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಗಾವಿಯ JMFC ಕೋರ್ಟ್ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಡ್ಜ್ ಸಂತೋಷ್ ಗಜಾನನ್ ಭಟ್ ಅವರು ವಿಚಾರಣೆ ನಡೆಸಿ ಬಳಿಕ ಜಾಮೀನು ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿ ಆದೇಶ ಹೊರಡಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಹಿರಿಯ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದ್ರೇ, ಸಿ.ಟಿ ರವಿ ಪರವಾಗಿ ಅಶೋಕ್ ಹಾರನಹಳ್ಳಿ ಪ್ರತಿವಾದ ಮಂಡಿಸಿದರು.
ವಾದ ಪ್ರತಿ ವಾದಗಳನ್ನು ಆಲಿಸಿದ ನ್ಯಾಯಾಲಯವು, ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.