ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧದ ಸಾಂವಿಧಾನಿಕ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ.ಟಿ.ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ನ್ಯಾಯಾಲಯ ಆದೇಶ ನೀಡಿದೆ.
ಸಿ.ಟಿ.ರವಿ ಅವರನ್ನು ಬೆಂಗಳೂರಿನ ವಿಶೇಷ ಜನತಾ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿಯ 5ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಮೂರ್ತಿ ಸ್ಪರ್ಶಾ ಡಿಸೋಜಾ ಆದೇಶಿಸಿದ್ದಾರೆ.
ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗ್ಗೆ ಬೆಳಗಾವಿ ಕೋರ್ಟ್‌ಗೆ ಸಿ.ಟಿ ರವಿ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ವಕೀಲರು ಜಾಮೀನು ನೀಡುವಂತೆ ಮನವಿ ಮಾಡಿದ್ದರು. ತನಿಖಾಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆದೊಯ್ಯಲು ಅನುಮತಿ ನೀಡುವಂತೆ ಮನವಿ ಮಾಡಿದ್ರು. ಅದಕ್ಕೆ ಕೋರ್ಟ್ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.